ಹೊಸದಿಂತ ಡಿಜಿಟಲ್ ಡೆಸ್ಕ್:
ವಿಜಯನಗರದ ಜಿಲ್ಲೆಯ ಹೊಸಪೇಟೆ ತಾಲೂಕಿನ ವ್ಯಾಸನಕೇರಿ ಬಳಿ ಟಿಪ್ಪರ್, ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 7 ಜನರು ಮೃತಪಟ್ಟಿದ್ದಾರೆ.
ರಾಷ್ತ್ರೀಯ ಹೆದ್ದಾರಿ 50ರಲ್ಲಿ ಸೋಮವಾರ ಮಧ್ಯಾಹ್ನ ಅವಘಡ ಸಂಭವಿಸಿದೆ.ಅಪಘಾತದಲ್ಲಿ ಕ್ರೂಸರ್ ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ. ಟಿಪ್ಪರ್ ಮುಂಭಾಗ ಜಖಂಗೊಂಡಿದ್ದು, ಕಳಚಿ ಬಿದ್ದಿದೆ. ಮತ್ತೊಂದು ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ.
ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆಯಲ್ಲಿ ಇನ್ನೂ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಮೃತರ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ. ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಜಖಂಗೊಂಡ ವಾಹನಗಳಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆದು, ಮುಂದಿನ ಕ್ರಮ ಕೈಗೊಂಡಿದ್ದಾರೆ.