ಕಾರು, ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ.

ಬಿಹಾರದ ಸೀತಾಮರ್ಹಿ ಜಿಲ್ಲೆಯ ಗಜಧರ್ ಶರ್ಮಾ (60), ಮಗ ಅನೀಶ್ ಶರ್ಮಾ (35), ಜವಾಹರ್ ಶರ್ಮಾ (57), ಸೋನಮ್ (34), ರಿಂಕು (32) ಎಂದು ಗುರುತಿಸಲಾಗಿದೆ.

ಬೆಳಗಿನ ಜಾವ 2:30ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರು ಪ್ರಯಾಗ್​ರಾಜ್​ಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಮಗು ಸೇರಿದಂತೆ ಮೂವರು ಬದುಕುಳಿದಿದ್ದು, ವಾರಣಾಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!