Monday, September 26, 2022

Latest Posts

ಕಾರು-ಟ್ಯಾಂಕರ್ ನಡುವೆ ಭೀಕರಅಪಘಾತ: ಸ್ಥಳದಲ್ಲೇ ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜಸ್ಥಾನ ಜಿಲ್ಲೆಯ ಅಬುರೋಡ್ ರಿಕೊ ಪೊಲೀಸ್ ಠಾಣೆ ವ್ಯಾಪ್ತಿಯ ಮಾವಲ್‌ನಲ್ಲಿ ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದ 6 ಜನರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದವರು ಗುಜರಾತ್‌ಗೆ ತೆರಳುತ್ತಿದ್ದರು ಎನ್ನಲಾಗಿದೆ. ಬೈಕ್ ಉಳಿಸುವ ಯತ್ನದಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದ ಭೀಕರತೆಗೆಕಾರಿನಲ್ಲಿದ್ದ ಐವರು ಏಕಕಾಲದಲ್ಲಿ ಅಸು ನೀಗಿದ್ದಾರೆ. ಇನ್ನೊಬ್ಬರು ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾರೆ.
ಮಾವಲ್ ತಿರುವಿನಲ್ಲಿ ಅತೀ ವೇಗದಲ್ಲಿ ಬಂದ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ತೀವ್ರವಾಗಿ ಜಖಂಗೊಂಡಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಅಪಘಾತದಿಂದ ವಾಹನ ಸಂಚಾರವೂ ಅಸ್ತವ್ಯಸ್ತವಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!