ಹೊಸದಿಗಂತ ವರದಿ ಚಿತ್ರದುರ್ಗ:
ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ನಗರದ ಹೊರವಲಯದಲ್ಲಿರು ಮದಕರಿಪುರ ಗ್ರಾಮದ ಬಳಿಯ ಹೊಸ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ಬೆಂಗಳೂರು ಮೂಲದ ನಿರ್ಮಲ.(55), ವಿನುತಾ(40)ಎಂದು ಗುರುತಿಸಲಾಗಿದೆ. ಪಣಿರಾಜ್ (36), ರಶ್ಮಿ (32), ಶ್ರೇಯಸ್ (2) ಗಾಯಾಳುಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಹೊಸಪೇಟೆಗೆ ಹೋಗುವ ಮಾರ್ಗದ ಚಿತ್ರದುರ್ಗ ಬಳಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.