ಹೊಸದಿಗಂತ ಬನವಾಸಿ:
ಸಮೀಪದ ಕಪ್ಪಗೇರಿ ಗ್ರಾಮದ ಬಳಿ ಸರ್ಕಾರಿ ಬಸ್ ಹಾಗೂ ಇಕೋ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ರಾಜಸ್ಥಾನ ಮೂಲದ ಓಂ ಸಿಂಗ್(45) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.
ಸೊರಬದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ ಚಾಲಕನ ಅಜಾಗರೂಕತೆಯಿಂದ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಬನವಾಸಿಯಲ್ಲಿ ಹಾಡ್೯ವೇರ್ ವ್ಯಾಪಾರ ಮಾಡುತ್ತಿದ್ದ ಮೃತ ಓಂಸಿಂಗ್ ಜಬ್ಬರ್ ಸಿಂಗ್ ತಮ್ಮ ವ್ಯಾಪಾರದ ನಿಮಿತ್ಯವಾಗಿ ಆನವಟ್ಟಿಗೆ ಸಾಗುವಾಗ ಈ ಅಪಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಕಲಾ ಪತ್ತಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.