ಜೀಪ್ – ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಾನಾಪುರ ತಾಲೂಕಿನ ಗುರಲಗುಂಜಿ ರಸ್ತೆಯಲ್ಲಿ ಜೀಪು ಮತ್ತು ದ್ವಿಚಕ್ರವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಮಲಿಂಗ್ ಮುತ್ಗೇಕರ್ (20) ಮತ್ತು ಹನುಮಂತ ಪಾಟೀಲ್ (20). ಈ ಯುವಕರು ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿಗೆ ತೆರಳಿದ್ದರು ಎಂದು ತಿಳಿದುಬಂದಿದೆ. ಮೃತ ಯುವಕರಿಬ್ಬರೂ ಬೇಕ್ವಾಡ ಗ್ರಾಮದವರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಶಾಸಕ ವಿಠ್ಠಲ್ ಹಲಗೇಕರ್ ಹಾಗೂ ಖಾನಾಪುರ ಪೊಲೀಸರು ಭೇಟಿ ನೀಡಿದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!