ಟ್ಯಾಂಕರ್- ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು

ಹೊಸದಿಗಂತ ವರದಿ, ಮೈಸೂರು:

ಟ್ಯಾಂಕರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ನಂಜನಗೂಡು ಮಲ್ಲುಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ತಗಡೂರು ಗ್ರಾಮದ ಮಹೇಶ್ (೨೪) ಹಾಗೂ ಮಹೇಶ್(೨೬)ಮೃತ ಕಾರ್ಮಿಕರು.

ಇವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಳಗಂಚಿಯಲ್ಲಿರುವ ಬಣ್ಣಾರಿ ಅಮ್ಮನ ಶುಗರ್ಸ್ ಕಾರ್ಖಾನೆಯಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಾರ್ಖಾನೆ ಕೆಲಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮಲ್ಲುಪುರ ಗ್ರಾಮದ ಬಳಿ ಟ್ಯಾಂಕರ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ವರುಣ ಕ್ಷೇತ್ರದ ಮಾಜಿ ಶಾಸಕ ಡಾ. ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ ನೊಂದ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಬಿಳಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಟ್ಯಾಂಕರ ಲಾರಿ ಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟ್ಯಾಂಕರ್ ಲಾರಿಯ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!