ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಬಡಾಪುರ ಮೇಲ್ಸೇತುವೆಯಲ್ಲಿ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ. ಮಧ್ಯರಾತ್ರಿ 12.48 ಕ್ಕೆ ಈ ಘಟನೆ ನಡೆದಿದೆ.
ಆಲ್ಟೊದಲ್ಲಿದ್ದ ಏಳು ಮಂದಿ ಫರಿದಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ದೆಹಲಿಗೆ ಹಿಂತಿರುಗುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಕಾರು ನಿಯಂತ್ರಣ ತಪ್ಪಿ, ಬದರ್‌ಪುರ ಮೇಲ್ಸೇತುವೆ ಮೇಲಿನ ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.