ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಟ್ರಕ್ ಮತ್ತು ಬಿಎಂಡಬ್ಲ್ಯು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ವಿದ್ಯಾರ್ಥಿಗಳು ಕಂಠಪೂರ್ತಿ ಕುಡಿದು ಕಾರ್ ರೇಸ್ ನಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಪಘಾತದ ಪರಿಣಾಮವಾಗಿ ಕಾರು ಮುಂದೆ ಸಾಗುತ್ತಿದ್ದ ಟ್ರಕ್ ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಅಪಘಾತದ ಪರಿಣಾಮ ಕಾರಿನಲ್ಲಿದ್ದ 6 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಪಾರ್ಟಿ ಮುಗಿಸಿ ಅಮಲಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.