July 14, 2026
Tuesday, July 14, 2026
spot_img

ಘೋರ ದುರಂತ: ಕಸದ ವಾಹನಗಳ ನಡುವೆ ಡಿಕ್ಕಿ; ಕರ್ತವ್ಯದಲ್ಲಿದ್ದ ಪೌರಕಾರ್ಮಿಕ ಸಾ*ವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಸ ವಿಲೇವಾರಿ ಕಾರ್ಯದಲ್ಲಿ ತೊಡಗಿದ್ದಾಗಲೇ ಪುರಸಭೆಯ ಎರಡು ಕಸದ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಪೌರಕಾರ್ಮಿಕ ಮೃತಪಟ್ಟು, ಮತ್ತೊಬ್ಬ ಮಹಿಳಾ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಶ್ರೀನಿವಾಸಪುರ ಪಟ್ಟಣದ ಇಂದಿರಾನಗರದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಸಂಪತ್ (35) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಮಹಿಳೆಯನ್ನು ಭೂಲಕ್ಷ್ಮಿ ಎಂದು ತಿಳಿದು ಬಂದಿದೆ.

ಇಂದಿರಾನಗರ ಬಡಾವಣೆಯಲ್ಲಿ ಎಂದಿನಂತೆ ಕಸ ವಿಲೇವಾರಿ ಪ್ರಕ್ರಿಯೆ ನಡೆಸುತ್ತಿದ್ದಾಗ ಪುರಸಭೆಗೆ ಸೇರಿದ ಕಸದ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣವೇ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಂಪತ್ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಜಿಲ್ಲಾ ಆಸ್ಪತ್ರೆಗೆ ಅಂಬುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ತೀವ್ರ ಗಾಯಗೊಂಡಿರುವ ಮತ್ತೊಬ್ಬ ಪೌರಕಾರ್ಮಿಕ ಮಹಿಳೆ ಭೂಲಕ್ಷ್ಮಿ ಅವರಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:

ಪೊಲೀಸ್ ತನಿಖೆ:

ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಅಧಿಕೃತ ಪ್ರಕರಣ ದಾಖಲಾಗಿದೆ. ತಾಂತ್ರಿಕ ದೋಷ ಅಥವಾ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೇ ಎಂಬ ನಿಖರ ಮಾಹಿತಿಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕರ್ತವ್ಯ ನಿರತ ಪೌರಕಾರ್ಮಿಕನ ಅಕಾಲಿಕ ನಿಧನದಿಂದಾಗಿ ಪುರಸಭೆ ಸಿಬ್ಬಂದಿ ಹಾಗೂ ಸ್ಥಳೀಯ ವಲಯದಲ್ಲಿ ತೀವ್ರ ಶೋಕ ಆವರಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !