ಘೋರ ದುರಂತ: ಕಸದ ವಾಹನಗಳ ನಡುವೆ ಡಿಕ್ಕಿ; ಕರ್ತವ್ಯದಲ್ಲಿದ್ದ ಪೌರಕಾರ್ಮಿಕ ಸಾ*ವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಸ ವಿಲೇವಾರಿ ಕಾರ್ಯದಲ್ಲಿ ತೊಡಗಿದ್ದಾಗಲೇ ಪುರಸಭೆಯ ಎರಡು ಕಸದ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಪೌರಕಾರ್ಮಿಕ ಮೃತಪಟ್ಟು, ಮತ್ತೊಬ್ಬ ಮಹಿಳಾ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಶ್ರೀನಿವಾಸಪುರ ಪಟ್ಟಣದ ಇಂದಿರಾನಗರದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಸಂಪತ್ (35) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಮಹಿಳೆಯನ್ನು ಭೂಲಕ್ಷ್ಮಿ ಎಂದು ತಿಳಿದು ಬಂದಿದೆ. ಇಂದಿರಾನಗರ ಬಡಾವಣೆಯಲ್ಲಿ ಎಂದಿನಂತೆ ಕಸ ವಿಲೇವಾರಿ ಪ್ರಕ್ರಿಯೆ ನಡೆಸುತ್ತಿದ್ದಾಗ ಪುರಸಭೆಗೆ ಸೇರಿದ ಕಸದ … Continue reading ಘೋರ ದುರಂತ: ಕಸದ ವಾಹನಗಳ ನಡುವೆ ಡಿಕ್ಕಿ; ಕರ್ತವ್ಯದಲ್ಲಿದ್ದ ಪೌರಕಾರ್ಮಿಕ ಸಾ*ವು!