ಅಮೆರಿಕದಲ್ಲಿ ಭೀಕರ ಅಪಘಾತ: ಆಂಧ್ರಪ್ರದೇಶ ಮೂಲದ ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶದ ಶಾಸಕರೊಬ್ಬರ ಸಂಬಂಧಿಕರು ಮೃತಪಟ್ಟಿದ್ದಾರೆ.

ಆಂದ್ರಪ್ರದೇಶದ ಅಮಲಾಪುರಂನ ಎನ್‌ಆರ್‌ಐ ಕುಟುಂಬದ ಆರು ಸದಸ್ಯರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜಾನ್ಸನ್ ಕೌಂಟಿಯಿಂದ ತಮ್ಮ ಸಂಬಂಧಿಕರ ಮನೆಗೆ ತೆರಳುವಾಗ ಮಿನಿವ್ಯಾನ್ ಹಾಗೂ ಪಿಕ್‌ಅಪ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ.

ಮಿನಿವ್ಯಾನ್‌ನಲ್ಲಿದ್ದ ವ್ಯಕ್ತಿಯೊಬ್ಬರು ಬದುಕುಳಿದಿದ್ದಾರೆ. ಇನ್ನು ಪಿಕ್‌ಅಪ್ ಚಲಾಯಿಸುತ್ತಿದ್ದ ಇಬ್ಬರು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರಪ್ರದೇಶದ ಮಮ್ಮಿಡಿವರಂ ಕ್ಷೇತ್ರದ ಶಾಸಕ ಕುಮಾರ್ ಈ ಬಗ್ಗೆ ಮಾತನಾಡಿ ಮೃತದೇಹಗಳನ್ನು ಭಾರತಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!