ಬೆಂಗಳೂರಿನಲ್ಲಿ ಭೀಕರ ಆಕ್ಸಿಡೆಂಟ್: ಫ್ಲೈಓವರ್​ನಿಂದ ಕೆಳಗುರುಳಿದ ಕಾರು, ಮೂವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರದಲ್ಲಿ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ಅಜಾಗರೂಕತೆಯಿಂದ ತಮಿಳುನಾಡು ನೋಂದಣಿ ಫಲಕದ ಕಾರೊಂದು ಯಶವಂತಪುರ ಮೇಲ್ಸೇತುವೆಯಿಂದ ಬಿದ್ದಿದೆ.

ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಳಗಿನ ಜಾವ 3:45ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಕಡೆಗೆ ತೆರಳುತ್ತಿದ್ದ ಕಾರಿನ ವೇಗದಿಂದಾಗಿ ಮೇಲ್ಸೇತುವೆಯ ಡಿವೈಡರ್ ಮೇಲಕ್ಕೆ ಹಾರಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಮೇಲ್ಸೇತುವೆಯಿಂದ ಕೆಳಗೆ ಬಿದ್ದಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!