ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಕಂಟೇನರ್ ಲಾರಿ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಯೇಸು, ಜೆನಿಫರ್ ಹಾಗೂ ಓರ್ವ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಚಾಲಕನ ಹೆಸರು ಇನ್ನೂ ತಿಳಿದುಬಂದಿಲ್ಲ.
ಮಾಹಿತಿಯ ಪ್ರಕಾರ, ಕಂಟೇನರ್ ಲಾರಿಯ ಸ್ಟೀರಿಂಗ್ ಕಟ್ ಆಗಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಮೊದಲು ಆಟೋಗೆ ಡಿಕ್ಕಿ ಹೊಡೆದ ಬಳಿಕ ಲಾರಿ, ಆಟೋ ಸಮೇತ ನಿರ್ಮಾಣ ಹಂತದ ಕಟ್ಟಡಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಅಪಘಾತದ ತೀವ್ರತೆಗೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ಪರಿಣಾಮವಾಗಿ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಕಂಟೇನರ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ವಾಹನ ತೆರವು ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.