ಬೆಂಗಳೂರಿನಲ್ಲಿ ಭೀಕರ ಅಪಘಾತ: ಓದಿ ವೈದ್ಯೆಯಾಗಬೇಕಿದ್ದ ಯುವತಿ ಮಸಣಕ್ಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜರಾಜೇಶ್ವರಿ ನಗರದಲ್ಲಿ ನಡೆದ ಭಯಾನಕ ರಸ್ತೆ ಅಪಘಾತದಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಮತ್ತೊಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಘಟನೆ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ನಿನ್ನೆ ಸಂಜೆ ಕಾಲೇಜು ಮುಗಿಸಿ ತೆರಳುವಾಗ ಈ ಅಪಘಾತ ಸಂಭವಿಸಿದೆ. ಆಕ್ಟೀವಾ ಬೈಕ್​​ಗೆ ಟಿಪ್ಪರ್​ ಲಾರಿ ಡಿಕ್ಕಿಯಾಗಿದ್ದು, ಕೃತಿಕಾ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತಿಕಾ (21) ಆರ್‌ಆರ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು. ಸ್ನೇಹಿತೆ ಹಂಸ (21) ಸಹ ಇದೇ ಕಾಲೇಜಿನ ಎಂಬಿಬಿಎಸ್ … Continue reading ಬೆಂಗಳೂರಿನಲ್ಲಿ ಭೀಕರ ಅಪಘಾತ: ಓದಿ ವೈದ್ಯೆಯಾಗಬೇಕಿದ್ದ ಯುವತಿ ಮಸಣಕ್ಕೆ!