ಬೀದರ್‌ನಲ್ಲಿ ಭೀಕರ ಅಪಘಾತ: ವಿದ್ಯುತ್‌ ಕಂಬಕ್ಕೆ ಕ್ರೂಸರ್‌ ಡಿಕ್ಕಿಯಾಗಿ ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೀದರ್‌ನ ಚಟ್ನಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ​ವಾಹನದಲ್ಲಿದ್ದ ಐವರ ಪೈಕಿ ಮೂವರು ಯುವಕರು ಮೃತಪಟ್ಟಿದ್ದಾರೆ.

ಪ್ರದೀಪ್(25), ವಿನೋದ್(26), ವರ್ದೀಶ್(25) ಮೃತರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!