ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯಲ್ಲಿ ಕಾರು ಬೈಕ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗೇಟ್ ಬಳಿಯಲ್ಲಿ ಕಾರೊಂದು ಬೈಕ್ ಗೆ ಡಿಕ್ಕಿಯಾಗಿದೆ. ಇದರಿಂದಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಪತಿ ಶಶಿಧರ್, ಪತ್ನಿ ಶಾಲಿನಿ ಹಾಗೂ ಭಾಗ್ಯಮ್ಮ ಎಂಬುದಾಗಿ ಗುರುತಿಸಲಾಗಿದೆ.