September 30, 2026
Wednesday, September 30, 2026
spot_img

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾ*ವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರ್‌ ಟಾಪ್ ಕಿತ್ತಿದ್ದು, ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಶ್, ಸಚಿನ್ ಮೃತ ದುರ್ದೈವಿಗಳು. ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐವರು ಒಂದೇ ಕಾರ್‌ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

Must Read