ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗದ ಲಕ್ಕುಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರು ಚಾಲಕ ಹಾಗೂ ಅವರ ಪಕ್ಕ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಸರ್ಕಾರಿ ಬಸ್ ಕೂಡ ಅಪಘಾತದ ರಭಸಕ್ಕೆ ಪಲ್ಟಿಯಾಗಿದ್ದು, ಪ್ರಯಾಣಿಕರಿಗೆ ಗಾಯಗಳಾಗಿವೆ.
ಕೊಪ್ಪಳ ಭಾಗದಿಂದ ಬರುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ. ಮೃತರ ಬಗ್ಗೆ ಮಾಹಿತಿ ದೊರೆತಿಲ್ಲ.