ಹೊಸದಿಗಂತ ಡಿಜಿಟಲ್ ಡೆಸ್ಕ್
ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಬಸ್ಸ್- ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಿಂದ್-ರೋಹ್ಟಕ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಟೆಲ್ ಬಳಿ ರಸ್ತೆಮಾರ್ಗದ ಬಸ್ ಭಾರೀ ಸರಕು ವಾಹನದೊಂದಿಗೆ ಮುಖಾಮುಖಿ ಡಿಕ್ಕಿ ಹೊಡೆದು ಟ್ರಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಗಾಯಗೊಂಡವರನ್ನು ಜುಲಾನಾದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದ್ದು, 20 ತೀವ್ರವಾಗಿ ಗಾಯಗೊಂಡ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ರೋಹ್ಟಕ್‌ನ PGIMS ಗೆ ವೈದ್ಯರು ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.