August 22, 2026
Saturday, August 22, 2026
spot_img

ಹೈದರಾಬಾದ್ ನಲ್ಲಿ ಭೀಕರ ಅಪಘಾತ: ರಸ್ತೆಯಲ್ಲೇ ಪ್ರಾಣ ಬಿಟ್ಟ ತೆಲುಗು ನಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈದರಾಬಾದ್ ಹೊರವಲಯದ ಹೊರ ವರ್ತುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ತೆಲುಗು ನಟ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ವೇಗವಾಗಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕೆ. ಭರತ್ ಕಾಂತ್ ಹಾಗೂ ಸಾಯಿ ತ್ರಿಲೋಕ್ ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಮೂಲದವರಾಗಿದ್ದಾರೆ. ಅಪಘಾತದ ವೇಳೆ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಚಾಲನೆ ಮಾಡುತ್ತಿದ್ದ ಭರತ್ ಕಾಂತ್ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಂಟೇನರ್ ಲಾರಿಯ ಹಿಂಭಾಗಕ್ಕೂ ಭಾರೀ ಹಾನಿಯಾಗಿದೆ. ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಕೆ. ಭರತ್ ಕಾಂತ್ ಡಿಜಿಟಲ್ ವೇದಿಕೆಗಳಲ್ಲಿ ಜನಪ್ರಿಯರಾಗಿದ್ದು, ಕಿರುಚಿತ್ರಗಳು ಹಾಗೂ ಕೆಲವು ತೆಲುಗು ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !