ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ಕಥುವಾದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐದು ಮಂದಿ ಮೃತಪಟ್ಟಿದ್ದಾರೆ.
ಬಿಲ್ಲವೆರ್ ಪ್ರದೇಶದ ಧನು ಪರೊಲೆ ಗ್ರಾಮದಲ್ಲಿ ಆಳವಾದ ಕಂದಕಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ಉರುಳಿಬಿದ್ದಿದೆ.
ಓರ್ವ ಮಹಿಳೆ ಸೇರಿ ಐವರು ಮೃತಪಟ್ಟಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ. ಖಾಸಗಿ ಮಿನಿ ಬಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. 60 ವರ್ಷದ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.