ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಅಲಪ್ಪುಝಾ ಜಿಲ್ಲೆಯಲ್ಲಿ ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಅವರು ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದರು. ಕರ್ಲಕೋಡ್ ಪ್ರದೇಶದಲ್ಲಿ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.
ಘಟನೆಯಿಂದಾಗಿ ಕಾರಿನಲ್ಲಿದ್ದ ಇಬ್ಬರು ಹಾಗೂ ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಂತ್ರಸ್ತರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.