ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ರಾಜ್‌ಗಢದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ.
ರಾಜಸ್ಥಾನದ ಮೋತಿಪುರ ಗ್ರಾಮದಿಂದ ರಾಜ್‌ಗಢ್‌ನ ಕುಲಂಪುರಕ್ಕೆ ಮದುವೆಯ ಕಾರ್ಯಕ್ರಮಕ್ಕೆ ಭಾಗಿಯಾಗಲು ಮೂವತ್ತು ಮಂದಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ, 15 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆ ಮತ್ತು ಎದೆಗೆ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಭೋಪಾಲ್‌ನ ಹಮಿಡಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರು ಅಪಾಯದಿಂದ ಪಾರಾಗಿರುವುದರಿಂದ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.