ಮಂಗಳೂರಿನಲ್ಲಿ ಭೀಕರ ಅಪಘಾತ: ಚಾಲಕ ಪವಾಡ ಸದೃಶವಾಗಿ ಪಾರು

ಹೊಸದಿಗಂತ ವರದಿ, ಮಂಗಳೂರು:

ನಗರದ ನಂತೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ಬುಧವಾರ ಸಂಜೆ ಸಂಭವಿಸಿದೆ.

ನಂತೂರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಕೆಪಿಟಿ ಕಡೆಯಿಂದ ಪಂಪ್ ವೆಲ್ ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕ ಬ್ರೇಕ್ ಹಾಕಿದಾಗ ಹಿಂದಿನಿಂದ ಬರುತ್ತಿದ್ದ ಪಿಕಪ್ ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಅದರಲ್ಲಿದ್ದ ಅಲ್ಯುಮೀ ನಿಯಂ ಪಟ್ಟಿಗಳು ಕಾರಿನೊಳಗೆ ತೂರಿ ಬಂದಿವೆ. ಕಾರಿನಲ್ಲಿ ಚಾಲಕ ಮಾತ್ರವಿದ್ದು ಅಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!