ಮೆಕ್ಸಿಕೋದಲ್ಲಿ ಭೀಕರ ಅಪಘಾತ : ಬಸ್ ಪಲ್ಟಿ ಹೊಡೆದು 15 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೆಕ್ಸಿಕೋದ ನಯಾರಿತ್‌ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 15 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 47 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಜೆ ದಿನಗಳ ಹಿನ್ನೆಲೆ ಪ್ರವಾಸಕ್ಕೆ ತೆರಳಿದ್ದ ಬಸ್ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.

ನಯಾರಿತ್‌ನ ಲಿಯಾನ್ ನಗರದ ನಿವಾಸಿಗಳೆಲ್ಲ ಪ್ರವಾಸ ಮುಗಿಸಿ ಗುಯಾಬಿಟೋಸ್‌ನಿಂದ ವಾಪಾಸ್ ತೆರಳುತ್ತಿದ್ದರು ಎನ್ನಲಾಗಿದೆ. ಮೃತರಲ್ಲಿ ಕನಿಷ್ಠ ನಾಲ್ಕು ಮಕ್ಕಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯಾವ ಕಾರಣದಿಂದ ಅಪಘಾತ ಸಂಭವಿಸಿದೆ ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!