ಮೈಸೂರಿನಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತಪಟ್ಟಿದ್ದಾರೆ. ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!