ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಭಂಡಾರಾ-ನಾಗ್ಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂಕಜೀವಿಗಳು ಬಲಿಯಾಗಿವೆ.
ಗುಜರಾತ್‌ನ ಕಚ್ ನಿವಾಸಿ ಗೋವಾ ರಬ್ಬಾನಿ ಎನ್ನುವವರು ತಮ್ಮ ಕುರಿಮಂದೆಯನ್ನು ಮೇಯಿಸಿಕೊಂಡು ಹೋಗುತ್ತಿದ್ದರು. ಎದುರಿಗೆ ವೇಗವಾಗಿ ಬಂದ ಟ್ರಕ್ ಕುರಿಹಿಂಡಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ 50ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.
15 ಕುರಿಗಳಿಗೆ ಗಂಭೀರವಾಗಿ ಗಾಯಗಳಾಗಿವೆ, ಟ್ರಕ್ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಾಗಿದೆ, ಕುರಿಗಾಹಿ ಗೋವಾಗೆ ಒಟ್ಟಾರೆ ಐದು ಲಕ್ಷ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ.