ನೆಲಮಂಗಲದಲ್ಲಿ ಭೀಕರ ಅಪಘಾತ: ಹಿಟ್ ಆ್ಯಂಡ್ ರನ್ ಗೆ ವೃದ್ಧೆ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೆಲಮಂಗಲ ತಾಲೂಕಿನ ಆನಂದನಗರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿರೇಸಂದ್ರದ ನಾರಯಣಮ್ಮ(66) ಮೃತಪಟ್ಟವರು. ಅಪಘಾತದ ನಂತರ ಚಾಲಕ ಕಾರಿನಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!