ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಟೋಗೆ KSRTC ಡಿಕ್ಕಿಯಾಗಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.
ಆಟೋ ಚಾಲಕ ಶ್ರೀನಿವಾಸ್ (40), ಪುಟ್ಟಮ್ಮ (55) ಮೃತ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡಿದ್ದ ವರ್ಷಿಣಿ (13) ಕೂಡ ಸಾವನ್ನಪ್ಪಿದ್ದಾರೆ.
ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಓರ್ವ ಮಹಿಳೆ, ಓರ್ವ ಪುರುಷ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ವಾಹನಗಳ ತೆರವು ಕಾರ್ಯ ನಡೆಸಿದ್ದಾರೆ.