ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಧೋಲ್‌ಪುರ ಪ್ರದೇಶದಲ್ಲಿ ಟೆಂಪೋಗೆ ಪ್ರಯಾಣಿಕರ ಬಸ್ ಡಿಕ್ಕಿ ಹೊಡೆದು ಕನಿಷ್ಠ 12 ಜನರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಸುನಿಪುರ್ ಬಳಿಯ ರಾಷ್ಟ್ರೀಯ ಹೆದ್ದಾರಿ 11-ಬಿಯಲ್ಲಿ ಅಪಘಾತ ಸಂಭವಿಸಿದೆ. ಬಲಿಯಾದವರಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಕ್ಕಳು ಕೂಡ ಸೇರಿದ್ದಾರೆ.
ಮದುವೆಯ ಆರತಕ್ಷತೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಪ್ರಯಾಣಿಕರನ್ನು ಬಸ್ಸು ಹೊತ್ತೊಯ್ಯುತ್ತಿತ್ತು. ಮೃತರಲ್ಲಿ ಐವರು ಬಾಲಕರು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.