ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಐರ್ಲೆಂಡ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇತರ ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ನಡೆದಿದೆ.
ಕೌಂಟಿ ಕಾರ್ಲೊದಲ್ಲಿ ಸಂಭವಿಸಿದ ಅಪಘಾತದ ಸುರೇಶ್ ಚೌಧರಿ ಮತ್ತು ಚಿತ್ತೂರಿ ಭಾರ್ಗವ್ ಮೃತಪಟ್ಟಿದ್ದಾರೆ.
ವಿದ್ಯಾರ್ಥಿಗಳು ಕಾರಿನಲ್ಲಿದ್ದಾಗ ವಾಹನವು ರಸ್ತೆಯಿಂದ ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.