ತಮಿಳುನಾಡಿನ ತೆಂಕಾಶಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ತೆಂಕಾಶಿ ಜಿಲ್ಲೆಯ ಪುಲ್ಲಿಯಂಗುಡಿಯಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ ಜಿಲ್ಲೆಯ ಕುಟ್ರಾಲಂನಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಪುಲ್ಲಿಯಂಗುಡಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ತೆಂಕಾಶಿಯ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!