ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ನಾಗರ್‌ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮುಂಬೈ ಬಂದರು ವಲಯದ ಉಪ ಪೊಲೀಸ್ ಆಯುಕ್ತ ಸುಧಾಕರ್ ಪತ್ತಾರೆ ಹಾಗೂ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.
ಅವರು ತೆರಳುತ್ತಿದ್ದ ಟೊಯೊಟಾ ಇನ್ನೋವಾ ಕಾರು ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಪತ್ತಾರೆ ಅವರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೈದರಾಬಾದ್‌ನಲ್ಲಿದ್ದರು ಎನ್ನಲಾಗಿದೆ. ಶ್ರೀಶೈಲದಲ್ಲಿನ ದೇವಾಲಯಕ್ಕೆ ಹೋಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಎಸ್‌ಯುವಿ ಬಸ್‌ಗೆ ಡಿಕ್ಕಿ ಹೊಡೆದಿದೆ.
ಸುಧಾಕರ್ ಪತ್ತಾರೆ 2010ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು ಎಂದು ಅಧಿಕಾರಿಯೊಬ್ಬರು ಮುಂಬೈನಲ್ಲಿ ತಿಳಿಸಿದ್ದಾರೆ.