ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ತುಮಕೂರು ನಗರದ ಹೊಸ ಬಡಾವಣೆ ಪೊಲೀಸ್ ಠಾಣೆ ಎದುರು ನಡೆದಿದೆ. ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದೆ.
ಮಾಹಿತಿ ಪ್ರಕಾರ, ಟಾಟಾ ನೆಕ್ಸನ್ ಕಾರಿನ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಕಾರು ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಆಟೋಗೆ ಕೂಡ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು. ಅಪಘಾತಕ್ಕೀಡಾದ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು ಎನ್ನಲಾಗಿದೆ.
ಕಾರಿನಲ್ಲಿ ಮದ್ಯದ ಬಾಟಲಿಗಳು ಮತ್ತು ಪ್ಲಾಸ್ಟಿಕ್ ಲೋಟಗಳು ಪತ್ತೆಯಾಗಿವೆ. ಇದೀಗ ಹೊಸ ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.