ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕಿ ಸೇರಿ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.
ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಧುಗಿರಿ ಠಾಣೆಯ ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೆಎ-03 NB 2646 ಸಂಖ್ಯೆಯ ನೆಕ್ಸಾ ಮಾರುತಿ ಕಾರು ಹಾಗೂ ಕೆಎ-64 M 2627 ಸಂಖ್ಯೆಯ ಟಿಯಾಗೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಧುಗಿರಿ ಕಡೆಯಿಂದ ತುಮಕೂರು ಕಡೆಗೆ ಟಿಯಾಗೋ ಕಾರು ಹೊರಟಿತ್ತು.