ವಿಜಯನಗರದಲ್ಲಿ ಭೀಕರ ಅಪಘಾತ: 7 ಜನರ ಸಾವು, ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಎರಡು ಆಟೋ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ .

ಎರಡು ಆಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.

ಬಳ್ಳಾರಿಯಿಂದ ತುಂಗಭದ್ರಾ ಡ್ಯಾಂ ಗೆ ಆಟೋದಲ್ಲಿ ಒಟ್ಟು 19 ಜನರು ಪ್ರಯಾಣಿಸುತ್ತಿದ್ದರು. ಈ ವೇಳೆ ವಡ್ಡರಹಳ್ಳಿ ಸೇತುವೆ ಬಳಿ ಎರಡು ಆಟೋ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಆಟೊ ಚಾಲಕ ಸೇರಿ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಈ ನಡುವೆ ಅಪಘಾತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಗಾಯಾಳು ಗಳ ಚಿಕಿತ್ಸೆಗಾಗಿ 50 ಸಾವಿರ ರೂಪಾಯಿ ನೀಡಲಾಗುತ್ತಿದೆ. ಸರ್ಕಾರವೇ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಸಚಿವ ನಾಗೇಂದ್ರ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!