ವಿಜಯಪುರದಲ್ಲಿ ಭೀಕರ ಅಪಘಾತ: ಕಾರು, ಟ್ರಕ್ ನಡುವೆ ಡಿಕ್ಕಿ, ನಾಲ್ವರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರು ಮತ್ತು ಟ್ರಕ್ ಡಿಕ್ಕಿ ಹೊಡೆದು ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ವಿಜಯಪುರದಿಂದ ಜಮಖಂಡಿಗೆ ತೆರಳುತ್ತಿದ್ದ ಕಾರು ಹಾಗೂ ಜಮಖಂಡಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಓರ್ವ ಬಾಲಕ ಸೇರಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!