ಪಶ್ಚಿಮ ಬಂಗಾಳದಲ್ಲಿ ಭೀಕರ ಅಪಘಾತ, ಐವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ನಾಡಿಯಾ ಹೆದ್ದಾರಿಯಲ್ಲಿ 10 ಚಕ್ರಗಳ ಲಾರಿ ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಬ್ಬರು ಮಕ್ಕಳು, ಮಹಿಳೆ ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ನಕಾಶಿಪಾರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಪ್ಲಾಜಾದಿಂದ ಓಮಿನಿ ಸ್ವಲ್ಪ ದೂರದಲ್ಲಿದ್ದಾಗ, ಎದುರು ದಿಕ್ಕಿನಿಂದ ಬರುತ್ತಿದ್ದ 10  ಚಕ್ರದ ಟ್ರಕ್ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಹತ್ತಿರಲ್ಲಿ ಹೆಚ್ಚು ಜನರಿರದ ಕಾರಣ ರಕ್ಷಣಾ ಕಾರ್ಯಾಚರಣೆ ತಡವಾಗಿದೆ. ಸ್ಥಲೀಯರು ಪೊಲೀಸರಿಗೆ ಮಾಹಿತಿ ನೀಡಿ, ಐವರನ್ನು ಗಾಡಿಯಿಂದ ಹೊರತೆಗೆದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದು, ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!