Saturday, December 9, 2023

Latest Posts

BREAKING | ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ 12 ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿದ್ದು, ಸುಮೋದಲ್ಲಿದ್ದವರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಿನ ಜಾವ ಅಪಘಾತ ಸಂಭವಿಸಿದ್ದು, ಮಂಜು ಮುಸುಕಿದ ಕಾರಣ ರಸ್ತೆ ಕಾಣದೆ ಚಾಲಕ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿರಬಹುದು ಎನ್ನಲಾಗಿದೆ.

ಆಂಧ್ರದ ಗೋರಂಟ್ಲು ಮೂಲದವರು ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಿದ್ದರು, ದಸರಾ ಹಬ್ಬಕ್ಕೆ ಗೋರಂಟ್ಲಿಗೆ ತೆರಳಿ ಮತ್ತೆ ಬೆಂಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರನ್ನು ಅರುಣ್, ನವೀನ್ ಕುಮಾರ್, ನಂಜುಂಡಪ್ಪ, ಪದ್ಮಾವತಿ ಹಾಗೂ ರುತ್ವಿಕ್ ಕುಮಾರ್ ಎಂದು ಗುರುತಿಸಲಾಗಿದೆ, ಉಳಿದವರ ಗುರುತು ಪತ್ತೆಯಾಗಿಲ್ಲ. ಚಿಕ್ಕಬಳ್ಳಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!