ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿಟಿ ವಾಹನ ಪಲ್ಟಿಯಾಗಿ ಮೂವರು ಜನರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.
ಶಂಕರಿಬಾಯಿ(65), ಕುಮಾರ ನಾಯ್ಕ್(46) ಮತ್ತು ಶ್ವೇತಾ(38) ಮೃತರು. ಐವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.