ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿಕ್ಕಬೆನ್ನೂರು ಬಳಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನುಳಿದ ಐವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.