September 10, 2026
Thursday, September 10, 2026
spot_img

ಕಲಬುರಗಿ ಬಳಿ ಭೀಕರ ಅಪಘಾತ: ಐವರ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಂಬನಿ

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಜರ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಕ್ರೂಜರ್ ಗಾಡಿಯಲ್ಲಿದ್ದ ಇಂಗಳಗಿ ಗ್ರಾಮದ ಐವರು ಸ್ಥಳದಲ್ಲೇ ಮೃತರಾಗಿರುವ ವಿದ್ರಾವಕ ಸುದ್ದಿಯು ಮನಸಿನಲ್ಲಿ ತಲ್ಲಣವನ್ನುಂಟುಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಅಮೂಲ್ಯ ಜೀವಗಳು ಅಪಘಾತಕ್ಕೆ ಬಲಿಯಾಗಿರುವುದರ ಬಗ್ಗೆ ನೋವು ವ್ಯಕ್ತಪಡಿಸಿ, ಭಾರವಾದ ಮನಸ್ಸಿನಿಂದಲೇ ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಮೃತರ ಕುಟುಂಬ ವರ್ಗವು ಧೈರ್ಯ ತಂದುಕೊಳ್ಳಬೇಕು ಎಂದಷ್ಟೇ ಈಗ ಹೇಳಬಹುದಾದ ಸಮಾಧಾನದ ಮಾತುಗಳು ಎಂದು ಪ್ರಿಯಾಂಕ್ ಹೇಳಿದ್ದಾರೆ.

ಇದನ್ನೂ ಓದಿ:

ಅಗತ್ಯ ನೆರವಿನ ಭರವಸೆ

ಈ ಕುರಿತು ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಮಾತನಾಡಿದ್ದೇನೆ, ನಾನು ಮತ್ತು ಜಿಲ್ಲಾಡಳಿತವು ಮೃತರ ಕುಟುಂಬದವರ ಅಗತ್ಯ ನೆರವಿಗೆ ಪೂರ್ಣ ಸಹಕಾರ ನೀಡಲಿದ್ದೇವೆ. ಪ್ರೀತಿಪಾತ್ರರ ಅಗಲಿಕೆ ಭರಿಸುವ ಶಕ್ತಿ ಮೃತರ ಕುಟುಂಬ ವರ್ಗಕ್ಕೆ ಸಿಗುವಂತಾಗಲಿ ಎಂದು ಆಶಿಸುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !