ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಓರ್ವ ಸಾವು

ಹೊಸದಿಂಗತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ನಡೆದಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಅಪಘಾತ (Road Accident) ಸಂಭವಿಸಿದ್ದು, ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡು, ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ಮಾರ್ಗದಿಂದ ಬರುತ್ತಿದ್ದ ಟಾಟಾ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಅಳವಡಿಸಿದ್ದ ಡಿವೈಡರ್‌ಗೆ ಡಿಕ್ಕಿಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!