ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ನಡೆದಿದೆ.
ಮುಂದೆ ಹೋಗುತ್ತಿದ್ದ ಟಾಟಾ ಎಕ್ಸ್ ಕಾರಿಗೆ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಡಿಸೈರ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುಂಬದಿ ಕಾರಿನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಸೆಲ್ವಿ, ಶ್ರೀವಾತ್ಸವ್, ನೀರಜ್ ಎಂಬುವವರು ಮೃತರು. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಸಾವಿನ ಹೆದ್ದಾರಿಯಾಗಿ ಮಾರ್ಪಡಾಗುತ್ತಿದೆ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.