ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಲಂಬಾಣಿ ತಾಂಡ್ಯದಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಇನೋವಾ ಕಾರು ಹಾಗು ಆಲ್ಟೊ ಕಾರು ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಈ ದುರಂತಕ್ಕೆ ಅತೀವೇಗದ ಚಾಲನೆಯೇ ಕಾರಣ ಎನ್ನಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!