ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಆಂಧ್ರ ಮೂಲದ ವೈದ್ಯ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ಹಾದು ಹೋಗುವ ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಈ ದುರ್ಘಟನೆ ನಡೆದಿದೆ. ಆಂಧ್ರ ಮೂಲದ ವೈದ್ಯ ಕೃಷ್ಣ ಜಗನ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅನಂತಪುರದಿಂದ ಕುಪ್ಪಂ ಪಿಇಎಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಅಪಘಾತಕ್ಕೆ ಅತಿ ವೇಗದ ಚಾಲನೆಯೇ ಕಾರಣವೆಂದು ಮೇಲೋಟ್ನಕ್ಕೆ ಕಂಡು ಬಂದಿದೆ.