March 23, 2026
Monday, March 23, 2026
spot_img

ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಮರ್ದಾಳ ಬ್ರಾಂತಿಕಟ್ಟೆ ಸಮೀಪ ರಸ್ತೆ ಅಪಘಾತ ಸಂಭವಿಸಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ಸಂಜೆ ಸಂಭವಿಸಿದೆ.

ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂಬತ್ತು ಜನರ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಜುನಾಥ, ಪ್ರಮೋದ್ ಮತ್ತು ತುಳಸಿ ಎಂದು ಗುರುತಿಸಲಾಗಿದೆ. ಉಳಿದಂತೆ ಪ್ರಿಯಾ, ವಿಠಲ, ಚಾಲಕ ಪ್ರೇಮಣ್ಣ, ಧನಲಕ್ಷ್ಮಿ ಹಾಗೂ ಸಮರ್ಥ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳು ಸಾಗರ ಮೂಲದವರು ಎಂದು ಹೇಳಲಾಗಿದೆ.

ಗಾಯಗೊಂಡವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !