September 28, 2026
Monday, September 28, 2026
spot_img

ಜಮಖಂಡಿ- ಮೀರಜ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗಾವಿಯ ಜಮಖಂಡಿ-ಮೀರಜ್‌ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬೈಕ್‌ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿ ಗಂಡ, ಹೆಂಡತಿ ಹಾಗೂ ಮಗು ಮೃತಪಟ್ಟಿದೆ.

ಗಿರೇಪ್ಪಾ ಕುಂದ್ರಾಳಿ, ಮಂಜುಳಾ ಕುಂದ್ರಾಳಿ ಹಾಗೂ ಆರಾಧ್ಯ ಕುಂದ್ರಾಳಿ ಮೃತರು. ಮಹಾರಾಷ್ಟ್ರದ ಮೀರಜ್‌ನಿಂದ ಜಮಖಂಡಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Must Read