ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ ಮೂವರು ದುರ್ಮರಣ ಹೊಂದಿರುವ ನಡೆದಿದೆ.

ಕೇರಳದ ತ್ರಿಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೊನ್ ಸೇರಿ ಮೂವರು ಮೃತರು. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಆಂಬ್ಯುಲೆನ್ಸ್‌ನಲ್ಲಿದ್ದ ರೋಗಿಗೂ ಗಾಯಗಳಾಗಿರುವುದು ಕಂಡುಬಂದಿದೆ.ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!